ಯೆಶಾಯ 30:30 - ಪರಿಶುದ್ದ ಬೈಬಲ್30 ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.