ಯೆಶಾಯ 30:32 - ಪರಿಶುದ್ದ ಬೈಬಲ್32 ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟೂ ದಮ್ಮಡಿ ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವದು. ಆತನು ಅವರೊಂದಿಗೆ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು. ಅಧ್ಯಾಯವನ್ನು ನೋಡಿ |
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.