Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:33 - ಪರಿಶುದ್ದ ಬೈಬಲ್‌

33 ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:33
30 ತಿಳಿವುಗಳ ಹೋಲಿಕೆ  

ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆಗ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು