ಯೆಶಾಯ 31:3 - ಪರಿಶುದ್ದ ಬೈಬಲ್3 ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. ಅಧ್ಯಾಯವನ್ನು ನೋಡಿ |