ಯೆಶಾಯ 31:4 - ಪರಿಶುದ್ದ ಬೈಬಲ್4 ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.