ಯೆಶಾಯ 31:8 - ಪರಿಶುದ್ದ ಬೈಬಲ್8 ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು. ಅಧ್ಯಾಯವನ್ನು ನೋಡಿ |
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.