Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:9 - ಪರಿಶುದ್ದ ಬೈಬಲ್‌

9 ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:9
20 ತಿಳಿವುಗಳ ಹೋಲಿಕೆ  

“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ?


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.


ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


“ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.


ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು