ಯೆಶಾಯ 32:17 - ಪರಿಶುದ್ದ ಬೈಬಲ್17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.