Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:18 - ಪರಿಶುದ್ದ ಬೈಬಲ್‌

18 ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಜನರು ಸಮಾಧಾನನಿವಾಸದಲ್ಲಿಯೂ ನಿರ್ಭಯನಿಲಯಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:18
26 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


“ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಇಸ್ರೇಲರು ವಾಸವಾಗಿದ್ದ ಗೋಷೆನ್ ಪ್ರದೇಶದಲ್ಲಿ ಮಾತ್ರ ಆಲಿಕಲ್ಲಿನ ಮಳೆಯಾಗಲಿಲ್ಲ.


ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ಬೇರೆ ದೇಶಗಳು ಅವರನ್ನು ಪ್ರಾಣಿಗಳನ್ನು ಹಿಡಿಯುವಂತೆ ಇನ್ನು ಹಿಡಿಯುವದಿಲ್ಲ. ಅವರು ಅವುಗಳನ್ನು ಇನ್ನು ಮುಂದಕ್ಕೆ ತಿನ್ನುವದಿಲ್ಲ. ಅವರು ಸುರಕ್ಷಿತವಾಗಿ ಜೀವಿಸುವರು. ಯಾರೂ ಅವರನ್ನು ಇನ್ನು ಹೆದರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು