Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:6 - ಪರಿಶುದ್ದ ಬೈಬಲ್‌

6 ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:6
33 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


‘ಕೆಟ್ಟಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. “ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.


ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.


ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.


ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು