ಯೆಶಾಯ 32:7 - ಪರಿಶುದ್ದ ಬೈಬಲ್7 ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಳ್ಳನ ಸಲಕರಣೆಗಳು ಕೆಟ್ಟವುಗಳೇ; ದೀನದರಿದ್ರರು ನ್ಯಾಯವಾದಿಗಳಾಗಿದ್ದರೂ ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.