ಯೆಶಾಯ 33:1 - ಪರಿಶುದ್ದ ಬೈಬಲ್1 ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ. ಅಧ್ಯಾಯವನ್ನು ನೋಡಿ |
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.