ಯೆಶಾಯ 33:10 - ಪರಿಶುದ್ದ ಬೈಬಲ್10 ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.