ಯೆಶಾಯ 33:11 - ಪರಿಶುದ್ದ ಬೈಬಲ್11 ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಆ ಕೆಲಸಗಳು ಒಣಹುಲ್ಲಿನಂತೆಯೂ ದಂಟಿನಂತೆಯೂ ಇವೆ. ನಿಮ್ಮ ಆತ್ಮವು ನಿಮ್ಮಲ್ಲಿ ಬೆಂಕಿಯಂತಿದ್ದು ನಿಮ್ಮನ್ನು ಸುಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ; ನಿಮ್ಮ ಬುಸುಗುಟ್ಟುವಿಕೆಯು ನಿಮ್ಮನ್ನೇ ನುಂಗುವ ಜ್ವಾಲೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಒಣಹುಲ್ಲನ್ನು ಗರ್ಭಧರಿಸಿ, ಪೈರಿನ ಮೋಟನ್ನು ಹೆರುವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.