ಯೆಶಾಯ 33:15 - ಪರಿಶುದ್ದ ಬೈಬಲ್15 ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 [ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿ |
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.