ಯೆಶಾಯ 33:18 - ಪರಿಶುದ್ದ ಬೈಬಲ್18-19 ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.