ಯೆಶಾಯ 33:2 - ಪರಿಶುದ್ದ ಬೈಬಲ್2 “ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.