Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:20 - ಪರಿಶುದ್ದ ಬೈಬಲ್‌

20 ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಹಬ್ಬ ಆಚರಣೆಗಳ ನಗರವಾದ ಸಿಯೋನನ್ನು ದೃಷ್ಟಿಸಿನೋಡಿ. ಆ ಜೆರುಸಲೇಮನ್ನು ಕಣ್ಣಿಟ್ಟು ನೋಡಿ. ಅದು ನೆಮ್ಮದಿಯ ನಿವಾಸವಾಗಿ, ಕೀಳಲಾಗದ, ಕೆಡವಲಾಗದ ದೃಢವಾದ ಗುಡಾರದಂತೆ ನಿಂತಿರುವುದನ್ನು ನೀವು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ. ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:20
18 ತಿಳಿವುಗಳ ಹೋಲಿಕೆ  

ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


“ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ.


ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


“ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸ್ವಾಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು