Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:24 - ಪರಿಶುದ್ದ ಬೈಬಲ್‌

24 ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:24
19 ತಿಳಿವುಗಳ ಹೋಲಿಕೆ  

ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು.


ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸಿದನು.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು