Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:4 - ಪರಿಶುದ್ದ ಬೈಬಲ್‌

4 ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:4
11 ತಿಳಿವುಗಳ ಹೋಲಿಕೆ  

“ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.


ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.


ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


ಚೂರಿ ಮಿಡತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡತೆ ತಿಂದಿತು. ಗುಂಪು ಮಿಡತೆ ತಿಂದುಬಿಟ್ಟದ್ದನ್ನು ಹಾರುವ ಮಿಡತೆ ತಿಂದಿತು. ಹಾರುವ ಮಿಡತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡತೆ ತಿಂದುಬಿಟ್ಟಿತು.


ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು