ಯೆಶಾಯ 33:5 - ಪರಿಶುದ್ದ ಬೈಬಲ್5 ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.