Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:7 - ಪರಿಶುದ್ದ ಬೈಬಲ್‌

7 ಆದರೆ ಕಿವಿಗೊಟ್ಟು ಕೇಳಿಸಿಕೊ, ದೂತರು ಹೊರಗೆ ಅಳುತ್ತಿದ್ದಾರೆ. ಸಮಾಧಾನದ ಸಮಾಚಾರವನ್ನು ತರುವವರು ಗಟ್ಟಿಯಾಗಿ ರೋಧಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ; ಸಮಾಧಾಯಕ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:7
6 ತಿಳಿವುಗಳ ಹೋಲಿಕೆ  

ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು