ಯೆಶಾಯ 33:8 - ಪರಿಶುದ್ದ ಬೈಬಲ್8 ರಸ್ತೆಗಳು ಹಾಳಾಗಿ ಯಾರೂ ಅದರಲ್ಲಿ ನಡಿಯುವದಿಲ್ಲ. ಜನರು ತಾವು ಮಾಡಿದ ಒಪ್ಪಂದವನ್ನು ನಡಿಸುತ್ತಿಲ್ಲ. ಸಾಕ್ಷಿಗಳ ಮಾತುಗಳನ್ನು ಜನರು ಗೌರವಿಸಲು ನಿರಾಕರಿಸುತ್ತಾರೆ. ಜನರು ಒಬ್ಬರನ್ನೊಬ್ಬರು ನಂಬುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾಜ ಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತು ಹೋದರು. ಅವನು ಒಪ್ಪಂದವನ್ನು ಮೀರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರ ಮಾಡಿ, ಯಾವ ಮನುಷ್ಯನನ್ನು ಗಣನೆಗೆ ತಾರನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.