ಯೆಶಾಯ 33:9 - ಪರಿಶುದ್ದ ಬೈಬಲ್9 ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.