Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:1 - ಪರಿಶುದ್ದ ಬೈಬಲ್‌

1 ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:1
25 ತಿಳಿವುಗಳ ಹೋಲಿಕೆ  

ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”


ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”


ಯೆಹೋವನು ಹೇಳುವುದೇನೆಂದರೆ: “ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ!


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.


“ದೂರದೇಶದಲ್ಲಿರುವವರೇ, ನಾನು ಮಾಡಿದ ಕಾರ್ಯಗಳ ವಿಷಯವಾಗಿ ಕೇಳಿರಿ. ನನ್ನ ಹತ್ತಿರವಿರುವವರೇ, ನನ್ನ ಸಾಮರ್ಥ್ಯದ ವಿಷಯವಾಗಿ ಕಲಿತುಕೊಳ್ಳಿರಿ.”


“ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


“ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.


ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು