Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:10 - ಪರಿಶುದ್ದ ಬೈಬಲ್‌

10 ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:10
15 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಲೋಕದಲ್ಲಿದ್ದ ಆ ಜನರು ಹೇಳಿದ್ದೇನೆಂದರೆ: “ಹಲ್ಲೆಲೂಯಾ! ಅವಳು ಸುಟ್ಟುಹೋಗುತ್ತಿದ್ದಾಳೆ. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಮೇಲೇಳುತ್ತಿರುವುದು.”


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು.


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಹೀಗೆನ್ನುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು