Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:13 - ಪರಿಶುದ್ದ ಬೈಬಲ್‌

13 ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:13
17 ತಿಳಿವುಗಳ ಹೋಲಿಕೆ  

ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ, ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ.


ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು