Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:14 - ಪರಿಶುದ್ದ ಬೈಬಲ್‌

14 ಕಾಡುಬೆಕ್ಕುಗಳು ಮತ್ತು ಕತ್ತೆಕಿರುಬಗಳು ಅಲ್ಲಿ ವಾಸಮಾಡುವವು. ಕಾಡುಹೋತಗಳು ತಮ್ಮ ಸ್ನೇಹಿತರನ್ನು ಕರೆಯುವವು. ರಾತ್ರಿಪ್ರಾಣಿಗಳು ಅಲ್ಲಿ ವಿಶ್ರಮಿಸಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಾಡುನಾಯಿಗಳೂ ತೋಳಗಳೂ ಅಲ್ಲಿ ಸೇರುವುವು; ಕಾಡುಮೇಕೆ ತನ್ನ ಜೊತೆ ಮೇಕೆಯನ್ನು ಕರೆದು ಕೂಗುವುದು; ಭೂತಪ್ರೇತಗಳು ಅಲ್ಲಿ ಹಾಯಾಗಿ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಾಡು ನಾಯಿ ತೋಳಗಳು ಅಲ್ಲಿ ಸಂಧಿಸುವವು, ದೆವ್ವವು ತನ್ನ ಜೊತೆಯನ್ನು ಕೂಗುವದು, ಬೇತಾಳವು ಅಲ್ಲಿ ಹಾಯಾಗಿ ಆಸರೆಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮರುಭೂಮಿಯ ಕಾಡುಮೃಗಗಳು ತೋಳಗಳೊಂದಿಗೆ ಸಂಧಿಸುವುವು, ಕಾಡುಮೇಕೆಗಳು ಪರಸ್ಪರ ಕರೆಯುತ್ತವೆ. ರಾತ್ರಿ ಮೃಗಗಳು ಸಹ ಅಲ್ಲಿ ಮಲಗುತ್ತವೆ. ತಮಗಾಗಿ ವಿಶ್ರಾಂತಿ ಸ್ಥಳಗಳನ್ನು ಕಂಡುಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:14
5 ತಿಳಿವುಗಳ ಹೋಲಿಕೆ  

ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು