ಯೆಶಾಯ 34:15 - ಪರಿಶುದ್ದ ಬೈಬಲ್15 ಅಲ್ಲಿ ಹಾವುಗಳು ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಲ್ಲಿಯೇ ಮೊಟ್ಟೆಗಳನ್ನಿಡುವವು, ಮೊಟ್ಟೆಗಳು ಒಡೆದಾಗ ಸಣ್ಣ ಹಾವುಮರಿಗಳು ಆ ಕತ್ತಲೆಯ ಜಾಗದಲ್ಲಿ ಹರಿದಾಡುವವು. ಹೆಂಗಸರು ಪರಸ್ಪರ ಸಂಧಿಸಿ ಮಾತನಾಡುವಂತೆ ಸತ್ತಪ್ರಾಣಿಗಳ ಮಾಂಸವನ್ನು ತಿನ್ನುವ ಪಕ್ಷಿಗಳು ಒಟ್ಟಾಗಿ ಸೇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು, ಮೊಟ್ಟೆಯಿಕ್ಕಿ ಮರಿಮಾಡಿ, ರೆಕ್ಕೆಗಳ ಅಡಿಯಲ್ಲಿ ಅವುಗಳನ್ನು ಕೂಡಿಸಿಕೊಳ್ಳುವುದು. ರಣಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು ಮೊಟ್ಟೆಯಿಕ್ಕಿ ಮರಿಮಾಡಿ ತನ್ನ ಮರೆಯಲ್ಲಿ ಕೂಡಿಸಿಕೊಳ್ಳುವದು; ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಲ್ಲಿ ಗೂಬೆಯು ಗೂಡನ್ನು ಮಾಡಿಕೊಂಡು, ಮೊಟ್ಟೆ ಇಟ್ಟು, ಮರಿ ಮಾಡಿ, ಅವುಗಳನ್ನು ತನ್ನ ರೆಕ್ಕೆಗಳ ನೆರಳಿನಲ್ಲಿ ಕಾಪಾಡುವುದು. ಅಲ್ಲಿಯೂ ಸಹ ಹದ್ದುಗಳು ಪ್ರತಿಯೊಂದೂ ಜೊತೆಜೊತೆಯಾಗಿ ಸೇರಿರುತ್ತವೆ. ಅಧ್ಯಾಯವನ್ನು ನೋಡಿ |