ಯೆಶಾಯ 34:4 - ಪರಿಶುದ್ದ ಬೈಬಲ್4 ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು. ಅಧ್ಯಾಯವನ್ನು ನೋಡಿ |