5 “ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.
ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.
“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.
ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.
ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”
ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”
ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”
ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.