ಯೆಶಾಯ 34:9 - ಪರಿಶುದ್ದ ಬೈಬಲ್9 ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿ ತೊರೆಗಳು ಶಿಲಾಜತುವಾಗಿ ಹರಿಯುವವು, ದೂಳು ಗಂಧಕವಾಗುವದು, ದೇಶವೆಲ್ಲಾ ಉರಿಯುವ ಶಿಲಾಜತುವಾಗುವದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”