ಯೆಶಾಯ 35:6 - ಪರಿಶುದ್ದ ಬೈಬಲ್6 ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.