ಯೆಶಾಯ 35:9 - ಪರಿಶುದ್ದ ಬೈಬಲ್9 ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿ |
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.