Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:1 - ಪರಿಶುದ್ದ ಬೈಬಲ್‌

1 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದೊಳಗೆ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:1
11 ತಿಳಿವುಗಳ ಹೋಲಿಕೆ  

ಹೀಗೆ ಒಳ್ಳೆಯ ಕಾರ್ಯಗಳನ್ನು ಹಿಜ್ಕೀಯನು ಮಾಡುತ್ತಿರುವಾಗ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಮೇಲೆ ಯುದ್ಧಮಾಡಲು ಬಂದನು. ಸರಿಯಾದ ಸಮಯದಲ್ಲಿ ಪಟ್ಟಣದ ಮೇಲೆ ಧಾಳಿಮಾಡಿ ಸೋಲಿಸುವದಕ್ಕೋಸ್ಕರ ಸನ್ಹೇರೀಬನೂ ಅವನ ಸೈನಿಕರೂ ಪಟ್ಟಣಗಳ ಕೋಟೆಗಳ ಹೊರಗಡೆ ಪಾಳೆಯ ಮಾಡಿದರು.


ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು