ಯೆಶಾಯ 36:12 - ಪರಿಶುದ್ದ ಬೈಬಲ್12 ಸೇನಾದಂಡನಾಯಕನು ಅದಕ್ಕುತ್ತರವಾಗಿ, “ನನ್ನ ಒಡೆಯನು ನಿಮ್ಮೊಂದಿಗೂ ನಿಮ್ಮ ಅರಸನೊಂದಿಗೂ ಮಾತ್ರ ಮಾತನಾಡಲು ಕಳುಹಿಸಲಿಲ್ಲ. ನನ್ನ ಒಡೆಯನು ಕೋಟೆಗೋಡೆಯ ಮೇಲೆ ಕುಳಿತಿರುವ ಜನರೊಂದಿಗೆ ಮಾತಾಡಲು ಕಳುಹಿಸಿದ್ದಾನೆ. ಆ ಜನರಿಗೆ ಊಟಕ್ಕೆ ಆಹಾರ, ಕುಡಿಯಲು ನೀರು ದೊರಕುವದಿಲ್ಲ. ಅವರು ನಿಮ್ಮ ಹಾಗೆ ತಮ್ಮ ಸ್ವಂತ ಮಲವನ್ನು ತಿಂದು ಮೂತ್ರವನ್ನು ಕುಡಿಯುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |