ಯೆಶಾಯ 36:16 - ಪರಿಶುದ್ದ ಬೈಬಲ್16 “‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. ಅಧ್ಯಾಯವನ್ನು ನೋಡಿ |