ಯೆಶಾಯ 36:18 - ಪರಿಶುದ್ದ ಬೈಬಲ್18 “‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ? ಅಧ್ಯಾಯವನ್ನು ನೋಡಿ |
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.