ಯೆಶಾಯ 36:22 - ಪರಿಶುದ್ದ ಬೈಬಲ್22 ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.