ಯೆಶಾಯ 36:5 - ಪರಿಶುದ್ದ ಬೈಬಲ್5 ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿಮಾತೇ ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದೀ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ? ಅಧ್ಯಾಯವನ್ನು ನೋಡಿ |