ಯೆಶಾಯ 36:7 - ಪರಿಶುದ್ದ ಬೈಬಲ್7 “‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ? ಅಧ್ಯಾಯವನ್ನು ನೋಡಿ |
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.