ಯೆಶಾಯ 36:8 - ಪರಿಶುದ್ದ ಬೈಬಲ್8 “‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.