ಯೆಶಾಯ 37:1 - ಪರಿಶುದ್ದ ಬೈಬಲ್1 ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”