Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:11 - ಪರಿಶುದ್ದ ಬೈಬಲ್‌

11 ಅಶ್ಶೂರದ ಅರಸರು ಬೇರೆ ಎಲ್ಲಾ ದೇಶಗಳವರಿಗೆ ಏನು ಮಾಡಿದ್ದಾರೆಂದು ನೀವು ಕೇಳಿದ್ದೀರಿ. ಅವರು ಸಂಪೂರ್ಣವಾಗಿ ತಮ್ಮ ವೈರಿಗಳನ್ನು ನಾಶಮಾಡಿದರು. ನೀವು ರಕ್ಷಿಸಲ್ಪಡುವಿರಾ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು. ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:11
9 ತಿಳಿವುಗಳ ಹೋಲಿಕೆ  

ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.


“ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.


ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.


ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು