Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:12 - ಪರಿಶುದ್ದ ಬೈಬಲ್‌

12 ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್, ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:12
19 ತಿಳಿವುಗಳ ಹೋಲಿಕೆ  

ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.


ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ.’”


ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.


ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.


ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು.


ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.


ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.’”


ತೆರಹನು ಇನ್ನೂರೈದು ವರ್ಷ ಬದುಕಿ ಹಾರಾನಿನಲ್ಲಿ ಸತ್ತುಹೋದನು.


“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!


ಹಮಾತಿನ, ಅರ್ಪಾದಿನ ದೇವರೆಲ್ಲಿ? ಅವರು ಸೋತುಹೋದರು. ಸೆಫರ್ವಯಿಮಿನ ದೇವರುಗಳೆಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು