Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:16 - ಪರಿಶುದ್ದ ಬೈಬಲ್‌

16 “ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:16
34 ತಿಳಿವುಗಳ ಹೋಲಿಕೆ  

ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


“ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.


ಆಗ ನಿನ್ನ ಹೆಸರು ಎಂದೆಂದೂ ಗೌರವಿಸಲ್ಪಡುತ್ತದೆ. ಜನರೆಲ್ಲರೂ ‘ಸರ್ವಶಕ್ತನಾದ ಯೆಹೋವನೇ ಇಸ್ರೇಲರ ದೇವರು!’ ಎಂದು ಹೇಳುವರು. ಅಲ್ಲದೆ ‘ನಿನ್ನ ಸೇವಕನಾದ ದಾವೀದನ ಕುಟುಂಬವು ನಿನ್ನ ಸನಿಧಿಯಲ್ಲಿ ಸ್ಥಿರವಾಗುವುದು’ ಎಂದು ಹೇಳುವರು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.


ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ:


ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು