Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:18 - ಪರಿಶುದ್ದ ಬೈಬಲ್‌

18 ಅಶ್ಶೂರದ ಅರಸರು ಆ ಎಲ್ಲಾ ಜನಾಂಗಗಳನ್ನು ನಾಶಮಾಡಿದ್ದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರಾ, ಅಸ್ಸೀರಿಯರ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ, ಅಶ್ಶೂರದ ಅರಸರು ಸಕಲಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:18
7 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು