ಯೆಶಾಯ 37:19 - ಪರಿಶುದ್ದ ಬೈಬಲ್19 ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.