Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:22 - ಪರಿಶುದ್ದ ಬೈಬಲ್‌

22 “ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:22
28 ತಿಳಿವುಗಳ ಹೋಲಿಕೆ  

ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.


ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,


“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ಯೆಹೋವನು ಹೇಳುವುದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”


ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ: “ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು