ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”
ಸೇನಾದಂಡನಾಯಕನು ಅದಕ್ಕುತ್ತರವಾಗಿ, “ನನ್ನ ಒಡೆಯನು ನಿಮ್ಮೊಂದಿಗೂ ನಿಮ್ಮ ಅರಸನೊಂದಿಗೂ ಮಾತ್ರ ಮಾತನಾಡಲು ಕಳುಹಿಸಲಿಲ್ಲ. ನನ್ನ ಒಡೆಯನು ಕೋಟೆಗೋಡೆಯ ಮೇಲೆ ಕುಳಿತಿರುವ ಜನರೊಂದಿಗೆ ಮಾತಾಡಲು ಕಳುಹಿಸಿದ್ದಾನೆ. ಆ ಜನರಿಗೆ ಊಟಕ್ಕೆ ಆಹಾರ, ಕುಡಿಯಲು ನೀರು ದೊರಕುವದಿಲ್ಲ. ಅವರು ನಿಮ್ಮ ಹಾಗೆ ತಮ್ಮ ಸ್ವಂತ ಮಲವನ್ನು ತಿಂದು ಮೂತ್ರವನ್ನು ಕುಡಿಯುವರು” ಎಂದು ಹೇಳಿದನು.
ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.
ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”